ಕೊಲ್ಕೊತ್ತಾ: ಟೀಂ ಇಂಡಿಯಾ ಮಾಜಿ ಆಟಗಾರ ಮನೋಜ್ ತಿವಾರಿ ಪಶ್ಚಿಮಬಂಗಾಳದ ಕ್ರೀಡಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
2008 ರಿಂದ 2015 ರವರೆಗೆ 12 ಏಕದಿನ ಹಾಗೂ 3 ಟಿ-20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಮನೋಜ್ ತಿವಾರಿ(35) ಇತ್ತೀಚೆಗೆ ರಾಜಕೀಯ ಪ್ರವೇಶಿಸಿದ್ದರು. ಈ ಬಾರಿ ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಶಿವಪುರ್ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಭರ್ಜರಿ ಜಯಗಳಿಸಿದ್ದರು. ಅವರಿಗೆ ಸಚಿವ ಸ್ಥಾನ ದೊರೆತಿದ್ದು, ಕ್ರೀಡಾ ಖಾತೆಯ ಜವಾಬ್ದಾರಿ ವಹಿಸಲಾಗಿದೆ. ಇದರೊಂದಿಗೆ ಮನೋಜ್ ತಿವಾರಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.