ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಜಂಟಿ ಸುದ್ದಿಗೋಷ್ಠಿ ನಡೆಸಿದ್ರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಲಸಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ತಯಾರಿ ಮಾಡಿಕೊಳ್ಳದೇ ಇರೋದೇ ಈ ಎಲ್ಲಾ ಸಮಸ್ಯೆಗೆ ಕಾರಣ ಎಂದು ಹೇಳಿದ್ರು.
ಕೇಂದ್ರ ಸರ್ಕಾರಕ್ಕೆ 2ನೆ ಅಲೆಯ ಬಗ್ಗೆ ಮೊದಲೇ ಮಾಹಿತಿ ಇತ್ತು. ಮೊದಲ ಅಲೆಯ ಅನುಭವವೂ ಇತ್ತು. ಆದರೂ ಸಹ ಸೂಕ್ತ ತಯಾರಿ ಕೈಗೊಳ್ಳೋದನ್ನ ಬಿಟ್ಟು ಜವಾಬ್ದಾರಿಯಿಂದ ನುಣುಚಿಕೊಂಡಿದೆ. ರಾಜ್ಯದ ಸಿಎಂ ಯಡಿಯೂರಪ್ಪ ನಿದ್ರಾವಸ್ಥೆಯಲ್ಲಿದ್ದಾರೆ. ಲಸಿಕೆಯ ಮೊದಲ ಡೋಸ್ ಹಾಗೂ 2ನೇ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಇಂದಿಗೂ ಸ್ಪಷ್ಟ ಮಾಹಿತಿ ನೀಡಿಲ್ಲ. ರಾಜ್ಯದ 7 ಕೋಟಿ ಜನರಿಗೆ ಲಸಿಕೆ ನೀಡಲು 2100 ಕೋಟಿ ರೂಪಾಯಿ ಹಣ ಬೇಕು. ರಾಜ್ಯ ಸರ್ಕಾರಕ್ಕೆ ಇದೆಲ್ಲ ಗೊತ್ತಿದ್ದರೂ ಏನೂ ಮಾಡ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದ್ರು.
ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಅನ್ನೋದನ್ನ ಕೇವಲ ನಾನು ಮಾತ್ರ ಹೇಳ್ತಿಲ್ಲ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೂಡ ಇದೇ ಅಭಿಪ್ರಾಯ ಹೊರಹಾಕಿದೆ. ರಾಜ್ಯದ ಜನತೆಯನ್ನ ಕೊರೊನಾದಿಂದ ಕಾಪಾಡುವ ಕೆಲಸ ಇವರಿಂದ ಆಗುತ್ತಿಲ್ಲ.