ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡೋ ಕೆಲಸ ರಾಜ್ಯ ಸರ್ಕಾರದ ಕೈಯಲ್ಲಿ ಆಗಿಲ್ಲ ಎಂದರೆ ನಾವು ಸಹಾಯ ಮಾಡ್ತೇವೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುವಾರ್ಗೆ ರಾಜ್ಯ ಬಿಜೆಪಿ ಟ್ವಿಟರ್ನಲ್ಲಿ ಟಾಂಗ್ ನೀಡಿದೆ.
ಸರ್ಕಾರಕ್ಕೆ ಉಚಿತ ಲಸಿಕೆ ಕೊಡಲು ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಡಿ.ಕೆ. ಶಿವಕುಮಾರ್ ಅವರೇ, ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯಕತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ರಾಜ್ಯ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.
ಇನ್ನೊಂದು ಟ್ವೀಟ್ನಲ್ಲಿ ಮಾನ್ಯ ಡಿ.ಕೆ. ಶಿವಕುಮಾರ್ ಅವರೇ, ಉಚಿತ ಲಸಿಕೆ ನೀಡಲು ನಿಮ್ಮ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಯೋಜನೆ ರೂಪಿಸಿದ್ದೀರಾ..? ಜಗತ್ತಿನ ನಾಲ್ಕನೇ ಶ್ರೀಮಂತ ಮಹಿಳೆ ಕೋವಿಡ್ ಸಹಾಯಹಸ್ತ ಚಾಚಿಲ್ಲವೇಕೆ..? ದೆಹಲಿಯಿಂದ ಗೋವಾಕ್ಕೆ ಬಂದದ್ದಾಯಿತು. ಗೋವಾದಿಂದ ಇಟಲಿಗೋ ..? ಎಂದು ಟೀಕಿಸಲಾಗಿದೆ.
ಬೆಳಗ್ಗೆ ಕೊರೊನಾ ಲಸಿಕೆ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ ವೈಫಲ್ಯಗಳನ್ನ ಪ್ರಶ್ನಿಸಲು ಜಂಟಿ ಸುದ್ದಿಗೋಷ್ಠಿ ಕರೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಲಸಿಕೆಯನ್ನ ಖರೀದಿಸಲು ಕಾಂಗ್ರೆಸ್ನಿಂದ 100 ಕೋಟಿ ರೂಪಾಯಿಯನ್ನ ನೀಡೋದಾಗಿ ಘೋಷಣೆ ಮಾಡಿದ್ದರು.