alex Certify ಗಂಟೆಗೆ 175 ಕಿ.ಮೀ. ವೇಗದ ಗಾಳಿಯೊಂದಿಗೆ ‘ತೌಕ್ತೆ’ ಚಂಡಮಾರುತ, ಹಲವೆಡೆ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಟೆಗೆ 175 ಕಿ.ಮೀ. ವೇಗದ ಗಾಳಿಯೊಂದಿಗೆ ‘ತೌಕ್ತೆ’ ಚಂಡಮಾರುತ, ಹಲವೆಡೆ ಭಾರೀ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಚಂಡಮಾರುತ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮೇ 18 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕೆಲವೆಡೆ 20 ಸೆ.ಮೀ. ವರೆಗೂ ಮಳೆಯಾಗಬಹುದು. ಮೇ 18 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದ ತಿರುವನಂತಪುರಂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಲಕ್ಷದ್ವೀಪ ಬಳಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ‘ತೌಕ್ತೆ’ ಚಂಡಮಾರುತ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಗಂಟೆಗೆ 175 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಜೊತೆಗೆ ತಮಿಳುನಾಡು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...