ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಪಿಎಂ ಕಿಸಾನ್ ಯೋಜನೆಯಡಿ 8 ನೇ ಕಂತಿನ ಹಣಕಾಸಿನ ನೆರವು ಬಿಡುಗಡೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ರಾಜ್ಯದ 55.36 ಲಕ್ಷ ರೈತರ ಖಾತೆಗಳಿಗೆ ಪ್ರಸಕ್ತ ವರ್ಷದ ಮೊದಲ ಕಂತು ಒಟ್ಟು 985.61 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಯೋಜನೆಯಡಿ ಪ್ರತಿ ವರ್ಷ ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ತಲಾ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. 2000 ರೂ. ಗಳಂತೆ 3 ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಈ ಯೋಜನೆಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ಫಲಾನುಭವಿಗಳಿಗೆ ವಾರ್ಷಿಕ 4000 ರೂಪಾಯಿ ಸಹಾಯಧನ ನೀಡಲಿದೆ ಎಂದು ಸಿಎಂ ತಿಳಿಸಿದ್ದಾರೆ.