alex Certify ‘ಕೋವಿಶೀಲ್ಡ್’ ಲಸಿಕೆ ಮೊದಲ ಡೋಸ್ ಪಡೆದುಕೊಂಡವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೋವಿಶೀಲ್ಡ್’ ಲಸಿಕೆ ಮೊದಲ ಡೋಸ್ ಪಡೆದುಕೊಂಡವರಿಗೆ ಮುಖ್ಯ ಮಾಹಿತಿ

ಕೋವಿಶೀಲ್ಡ್ ಕೊರೋನಾ ತಡೆ ಲಸಿಕೆ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರ ಹೆಚ್ಚಳ ಮಾಡಲಾಗಿದೆ.

ಕೋವಿಶೀಲ್ಡ್ ಮೊದಲ ಡೋಸ್ ಪಡೆದುಕೊಂಡವರು 12 ರಿಂದ 16 ವಾರಗಳಲ್ಲಿ ಎರಡನೇ ಡೋಸ್ ಪಡೆಯಬೇಕಿದೆ. ಈ ಮೊದಲು ಮೊದಲ ಡೋಸ್ ಪಡೆದುಕೊಂಡ 6 ರಿಂದ 8 ವಾರಗಳ ನಂತರ ಎರಡನೇ ಡೋಸ್ ಪಡೆಯಲು ತಿಳಿಸಲಾಗಿತ್ತು. ಆದರೆ, ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಕೋವಿಶೀಲ್ಡ್ ಲಸಿಕೆಗಳ ನಡುವಿನ ಅಂತರವನ್ನು ಹೆಚ್ಚಳ ಮಾಡಲಾಗಿದೆ. ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ಹೆಚ್ಚಳ ಮಾಡಲಾಗಿದೆ.

ಕೋವಿಶೀಲ್ಡ್ 2 ಲಸಿಕೆಗಳ ನಡುವಿನ ಅಂತರವನ್ನು 6 ರಿಂದ 8 ವಾರ ಬದಲಿಗೆ 12 ರಿಂದ 16 ವಾರಗಳಿಗೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಕೊವ್ಯಾಕ್ಸಿನ್ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನು 4 -6 ವಾರಗಳ ಅವಧಿಯಲ್ಲಿ ಪಡೆದುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...