ನವದೆಹಲಿ: ಗ್ರಾಮೀಣ ಪ್ರದೇಶಗಳಿಗೆ ಕೊರೋನಾ ಸೋಂಕು ತಡೆಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದರೆ ಆಶಾ ಕಾರ್ಯಕರ್ತೆಯರು ತಕ್ಷಣವೇ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಹೇಳಲಾಗಿದೆ.
ಮನೆ ಮನೆಗೆ ತೆರಳಿ ಸರ್ವೆ ಮಾಡುವಂತೆ ಸೂಚನೆ ನೀಡಬೇಕು. ಸಮುದಾಯ ಆರೋಗ್ಯ ಅಧಿಕಾರಿಯಿಂದ ಚಿಕಿತ್ಸೆ ಮಾಹಿತಿ ಕೊಡಿಸಬೇಕು. ಗ್ರಾಮೀಣ ಮಟ್ಟದಲ್ಲಿ ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆಯ ಬಗ್ಗೆ ಮಾಹಿತಿ ಕೊಡಬೇಕು. ಸಹಾಯಕ ನರ್ಸ್ ಗಳಿಗೆ ಕೋವಿಡ್ ಟೆಸ್ಟ್ ತರಬೇತಿ ಕೊಡಬೇಕು.
ಕೋವಿಡ್ ಲಕ್ಷಣಗಳಿದ್ದರೆ ಕ್ವಾರಂಟೈನ್ ಮಾಡಬೇಕು. ಟೆಸ್ಟ್ ವರದಿ ಬರುವುದಕ್ಕೆ ಮೊದಲೇ ಕ್ವಾರಂಟೈನ್ ನಲ್ಲಿ ಇರಬೇಕು. ಸೋಂಕಿತರಿಗೆ ಆಸ್ಪತ್ರೆಗೆ ಅಗತ್ಯವಿಲ್ಲದಿದ್ದರೆ ಹೋಮ್ ಐಸೋಲೇಷನ್ ನಲ್ಲಿ ಇರಿಸಬೇಕು. ಅದು ಆಗದಿದ್ದರೆ ಹತ್ತಿರದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು.
ಹೋಂ ಐಸೋಲೇಷನ್ ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ನೀಡುವಂತೆ ಸೂಚನೆ ನೀಡಲಾಗಿದೆ. ಪಲ್ಸ್ ಕಡಿಮೆ ಇದ್ದರೆ ತಕ್ಷಣ ಚಿಕಿತ್ಸೆ ಒದಗಿಸುವಂತೆ ತಿಳಿಸಲಾಗಿದೆ.