ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಸೇರಿದಂತೆ ನಾಲ್ವರು ಟಿಎಂಸಿ ನಾಯಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ನಾರದ ಸ್ಟಿಂಗ್ ಆಪರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಫಿರ್ಹಾದ್ ಹಕೀಮ್, ಪಂಚಾಯತ್ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್ ಮಿತ್ರಾ ಹಾಗೂ ಟಿಎಂಸಿ ಮಾಜಿ ಮುಖಂಡ ಸೋನಮ್ ಚಟರ್ಜಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಹಾಡಹಗಲೇ ರಸ್ತೆಗೆ ಬಂದ ಹುಲಿ ನೋಡಿ ಬೆಚ್ಚಿಬಿದ್ದ ಜನ
ನಾರದ ಮಾರುವೇಷ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಟಿಎಂಸಿಯ ಈ ನಾಲ್ವರು ನಾಯಕರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ನಾಲ್ವರನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಹಿಂದಷ್ಟೇ ರಾಜ್ಯಪಾಲ ಜಗದೀಪ್ ಧನ್ ಕರ್ ಸಿಬಿಐಗೆ ತನಿಖೆಗೆ ಅನುಮತಿ ನೀಡಿದ್ದರು. ಇದರ ಬೆನ್ನಲ್ಲೇ ಇಬ್ಬರು ಸಚಿವರು, ಓರ್ವ ಶಾಸಕ ಸೇರಿ ನಾಲ್ವರು ಟಿಎಂಸಿ ಮುಖಂಡರನ್ನು ಬಂಧಿಸಲಾಗಿದೆ. ಪಕ್ಷದ ಮುಖಂಡರ ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಗೆ ದೌಡಾಯಿಸಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.