ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಕಡಿಮೆಯಾಗಿದ್ದರೂ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳಲ್ಲಿ ಮೇ 19 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಬುಧವಾರದವರೆಗೆ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ಪ್ರಭಾವ ಕಡಿಮೆಯಾಗಿದ್ದರೂ ಸಮುದ್ರದಲ್ಲಿ ಐದು ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವ ಜೊತೆ ವೇಗದ ಗಾಳಿ ಬೀಸುತ್ತಿದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.