ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅಯೋಗ್ಯ ಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ತೀವ್ರ ಏರಿಕೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಬಂದರೂ ನಿರ್ಲಕ್ಷಿಸಲಾಯಿತು ಎಂದು ದೂರಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಅವರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿಲ್ಲ. ಸಮಯ ವ್ಯರ್ಥ ಮಾಡುತ್ತ ಕಾಲ ಕಳೆದರು. ಅವರೊಬ್ಬ ಅಯೋಗ್ಯ ಮಂತ್ರಿ ಎಂದು ಆರೋಪಿಸಿದ್ದಾರೆ. ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಒಂದೊಂದು ರಾಜ್ಯಕ್ಕೆ ಒಂದೊಂದು ದರದಲ್ಲಿ ಲಸಿಕೆ ನೀಡಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.