ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಎಂಟನೇ ಕಂತಿನ ಸಹಾಯಧನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 14ರಂದು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಈ ಕಂತಿನ ಹಣವನ್ನು ಫಲಾನಿಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವ ಕೆಲಸಕ್ಕೆ ಚಾಲನೆ ಕೊಟ್ಟಿದ್ದಾರೆ.
ದೇಶಾದ್ಯಂತ 9.5 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನಿ ಒಟ್ಟಾರೆ 20,000 ಕೋಟಿ ರೂ.ಗೂ ಅಧಿಕ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆರಂಭಿಕ ದಿನಗಳಲ್ಲಿ ಕೆಲವು ರೈತರ ಖಾತೆಗಳಿಗೆ ಇನ್ನೂ ದುಡ್ಡು ಜಮೆಯಾಗದೇ ಇರುವ ಸಾಧ್ಯತೆ ಇದೆ.
ರೈತರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಸಂಕಷ್ಟಕ್ಕೆ ಒಳಗಾದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ…?
ನಿಮ್ಮ ಹೆಸರನ್ನು ಪಿಎಂ ಕಿಸಾನ್ ಜಾಲತಾಣಕ್ಕೆ ಭೇಟಿ ಕೊಟ್ಟು ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲನೆ ಮಾಡಿ, ಒಂದು ವೇಳೆ ದೂರುಗಳಿದ್ದರೆ ಇದಕ್ಕೆಂದೇ ಇರುವ ಹಾಟ್‌ಲೈನ್ ಸಂಖ್ಯೆಗಳಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ನಿಮ್ಮ ದೂರುಗಳು ಏನೇ ಇದ್ದರೂ 011-24300606 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.