ನೈರುತ್ಯ ಮಾನ್ಸೂನ್ ಮಾರುತಗಳು ಮೇ 31 ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಲಿದೆ. ಜೂನ್ 5 ಅಥವಾ 6 ರೊಳಗೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ.
ಮೇ 20 ರಂದು ಮಾನ್ಯೂನ್ ಮಾರುತಗಳು ಬಂಗಾಳಕೊಲ್ಲಿಯಲ್ಲಿ ಬೀಸಲಿದ್ದು, ಮೇ 21 ಕ್ಕೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶ, ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ. ಮೇ 21 ರ ಬೆಳಗ್ಗೆ ಮಾನ್ಸೂನ್ ಮಾರುತಗಳು ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಮೇ 31 ಕ್ಕೆ ಕೇರಳ ಪ್ರವೇಶಿಸಲಿರುವ ಮುಂಗಾರು ಜೂನ್ ಮೊದಲ ವಾರದ ವೇಳೆಗೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ಸಾಮಾನ್ಯವಾಗಿ ಮುಂಗಾರು ಅವಧಿ ಇರಲಿದೆ. ಶೇಕಡ 70 ಭಾಗದಲ್ಲಿ ವಾಡಿಕೆ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.