ಕೊರೋನಾದಿಂದ ಮೃತಪಟ್ಟವರ ಮಕ್ಕಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. 18 ವರ್ಷದೊಳಗಿನ ಮಕ್ಕಳು ಅನಾಥರಾಗಿದ್ದಲ್ಲಿ ಆಂಧ್ರಪ್ರದೇಶ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ನೀಡಲಿದೆ.
ತಂದೆ-ತಾಯಿ ಇಬ್ಬರು ಮೃತಪಟ್ಟಿದ್ದರೆ ಅನಾಥರಾದ ಮಕ್ಕಳ ಹೆಸರಿಗೆ 10 ಲಕ್ಷ ರೂ. ಎಫ್.ಡಿ. ಇಡಲು ಸರ್ಕಾರ ಆದೇಶ ಹೊರಡಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕೊರೋನಾದಿಂದ ಮೃತಪಟ್ಟ ಮಕ್ಕಳಿಗೆ ಪರಿಹಾರ ಘೋಷಣೆ ಮಾಡಿದ್ದು, ಕೂಡಲೇ ಅಗತ್ಯಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.