ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದ್ದರೂ ಕೂಡ ಜನರು ಮಾತ್ರ ಪಾಲಿಸುತ್ತಿಲ್ಲ. ಬೇಕಾಬಿಟ್ಟಿಯಾಗಿ ಓಡಾಡಿ ಬೇಜವಾಬ್ದಾರಿ ಮುಂದುವರೆಸಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಹಳ್ಳಿ ಹಳ್ಳಿಗಳಲ್ಲಿ ಸೋಂಕು ಹರಡುತ್ತಿದೆ. ಇಷ್ಟಾಗ್ಯೂ ಜನರು ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಸಂಚರಿಸುತ್ತಿದ್ದಾರೆ. ಇನ್ಮುಂದೆ ಅನಗತ್ಯವಾಗಿ ಓಡಾಡುವ ಜನರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
BIG NEWS: ಮೇ 31 ಕ್ಕೆ ಕೇರಳಕ್ಕೆ ನೈರುತ್ಯ ಮುಂಗಾರು, ಜೂನ್ ಮೊದಲ ವಾರದಿಂದ ರಾಜ್ಯದಲ್ಲಿ ಮಳೆ ಶುರು
ಲಾಕ್ ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು. ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ವಾಹನ ಸೀಜ್ ಮಾಡಿ, ಕೇಸ್ ದಾಖಲಿಸಲಾಗುವುದು ಎಂದು ಹೇಳಿದರು.