ನವದೆಹಲಿ: ಕೊರೊನಾ ಅಟ್ಟಹಾಸದ ನಡುವೆ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ದೆಹಲಿಯ ಇಎಸ್ಐ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಪಂಜಾಬಿ ಭಾಗ್ ನಲ್ಲಿರುವ ಇಎಸ್ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 7 ಅಗ್ನಿಶಾಮಕ ದಳಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.