ಬೆಂಗಳೂರು: ಕೊರೋನಾ ಮೂರನೇ ಎದುರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಳ್ಳುತ್ತಿದ್ದು, ಎಲ್ಲ ತಾಲೂಕುಗಳಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸಿದ್ಧತೆ ಕೈಗೊಂಡಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮುದಾಯ ಭವನ ಮತ್ತು ಕೆಲವು ಖಾಸಗಿ ಆಸ್ಪತ್ರೆಗಳನ್ನು ಮಕ್ಕಳ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೂರನೆಯ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಅಪಾಯ ಉಂಟಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲಾಗುವುದು. ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಹಣ ಬಿಡುಗಡೆ ಮಾಡಿದ್ದು, ಮಕ್ಕಳ ಆಸ್ಪತ್ರೆ ತೆರೆದು ತಜ್ಞ ಮಕ್ಕಳ ವೈದ್ಯರನ್ನು ಗುರುತಿಸುವಂತೆ ತಿಳಿಸಲಾಗಿದೆ.