ಪಣಜಿ: ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅತ್ಯಾಚಾರ ಪ್ರಕರಣದಲ್ಲಿ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಕೋರ್ಟ್ ತೀರ್ಪು ನೀಡಿದೆ.
ಪ್ರಕರಣ ಕುರಿತು ಅಂತಿಮ ಹಂತದ ವಿಚಾರಣೆ ನಡೆಸಿದ್ದ ಗೋವಾ ಸೆಷನ್ಸ್ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತರುಣ್ ತೇಜ್ ಪಾಲ್ ನಿರ್ದೋಷಿಯಾಗಿದ್ದು, ಪ್ರಕರಣದಿಂದ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.
ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಎಡವುತ್ತಿರುವ ಸರ್ಕಾರ; ಬ್ಲಾಕ್ ಫಂಗಸ್ ಸಾಂಕ್ರಾಮಿಕ ಎಂದು ಘೋಷಿಸಿ; ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕೆ. ಒತ್ತಾಯ
2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್ ನ ಲಿಫ್ಟ್ ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ತರುಣ್ ತೇಜ್ ಪಾಲ್ ವಿರುದ್ಧ ಕೇಳಿಬಂದಿತ್ತು. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ತರುಣ್ ತೇಜ್ ಪಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣಗಳ ವಿರುದ್ಧ ತೇಜ್ ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಜಾಗೊಳಿಸಿದ್ದ ಸುಪ್ರೀಂ ಆರೋಪವನ್ನು ಕೈಬಿಡಲು ಸಾಧ್ಯವಿಲ್ಲ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿ ಗೋವಾ ಕೋರ್ಟ್ ಗೆ ಕೇಸ್ ವರ್ಗಾಯಿಸಿತ್ತು.