ಬೆಂಗಳೂರು: ರಾಜ್ಯದ ಹಳ್ಳಿ, ಹಳ್ಳಿಗಳಲ್ಲೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಬಹುತೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಇಂದು ಸಂಜೆ ನಡೆಯಲಿರುವ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆಗಿನ ಸಿಎಂ ಸಭೆ ಮಹತ್ವ ಪಡೆದುಕೊಂಡಿದೆ.
ಈ ನಡುವೆ ಲಾಕ್ ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಇಂದು ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಲಾಕ್ ಡೌನ್ ಬಗ್ಗೆ ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ
ಒಟ್ಟಾರೆ ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಲಾಕ್ ಡೌನ್ ಇನ್ನಷ್ಟು ಕಠಿಣವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆ ಸಂಜೆ ನಡೆಯಲಿರುವ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ನಾಳಿನ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.