ಬೆಂಗಳೂರು: ಕೊರೊನಾದಂತಹ ಸಂದರ್ಭವನ್ನು ಬಳಸಿಕೊಂಡು ವಿಪಕ್ಷನಾಯಕ ಸಿದ್ದರಾಮಯ್ಯ ಮತ್ತೊಂದು ಮಹಾವಲಸೆಗೆ ಸಿದ್ಧತೆ ನಡೆಸಿರುವ ಸೂಚನೆ ಕಂಡುಬರುತ್ತಿದೆ.
ಸಿದ್ದರಾಮಯ್ಯ ವಲಸೆನಾಯಕರಾಗುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.
ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿ ಕ್ಷೇತ್ರದ ಶಾಸಕರಾಗಿದ್ದರೂ ಚಾಮರಾಜಪೇಟೆ ಕ್ಷೇತ್ರದ ಮೇಲೆ ವಿಶೇಷ ಒಲವು ತೋರುತ್ತಿರುವುದರ ಹಿಂದಿನ ಉದ್ದೇಶವಾದರೂ ಏನು? ಕೋವಿಡ್ ಸಂದರ್ಭದಲ್ಲಿ ಮತ್ತೊಂದು ಮಹಾವಲಸೆಗೆ ಸಿದ್ದರಾಮಯ್ಯ ಸಿದ್ಧವಾಗುತ್ತಿರುವ ಸೂಚನೆ ಕಂಡುಬರುತ್ತಿದೆ ಎಂದು ಸರಣಿ ಟ್ವೀಟ್ ಮಾಡಿದೆ.
ಕೋವಿಡ್ ಬಂದ ನಂತರ ಬಾದಾಮಿ ಕ್ಷೇತ್ರಕ್ಕೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ, ಎಷ್ಟು ಲಸಿಕೆ ಹಾಕಿಸಿದ್ದೀರಿ ಎಂದು ಜನರು ಪ್ರಶ್ನೆ ಕೇಳಿದರೆ ಸಿದ್ದರಾಮಯ್ಯನವರಿಗೆ ಸರ್ವಾಂಗವೂ ಉರಿಯುತ್ತದೆ. ಆದರೆ ಚಾಮರಾಜಪೇಟೆ ಕ್ಷೇತ್ರಕ್ಕೆ ಪದೇ ಪದೇ ಭೇಟಿ ನೀಡುವ ಉದ್ದೇಶವನ್ನಾದರೂ ಸ್ಪಷ್ಟಪಡಿಸಲಿ ಎಂದು ಹೇಳಿದೆ.
ಆಮ್ಲಜನಕ ಟ್ಯಾಂಕರ್ ಚಾಲಕರಿಗೆ ಲಸಿಕೆ ನೀಡುವಂತೆ ಕೇಂದ್ರ ಸೂಚನೆ
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಆಚರಣೆ, ಶಾದಿಭಾಗ್ಯ ಯೋಜನೆಯನ್ನು ಏಕೆ ಜಾರಿಗೆ ತಂದಿದ್ದು ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ. ಚಾಮರಾಜಪೇಟೆಯಂಥ ಕ್ಷೇತ್ರವನ್ನು ಸಮಯ ಬಂದಾಗ ಅಪ್ಪಿಕೊಳ್ಳುವ ಉದ್ದೇಶಕ್ಕಾಗಿ ಅಲ್ಲವೇ ಎಂದು ಪ್ರಶ್ನಿಸಿದೆ.