ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿಯ ವೇಳೆ ದುರಂತ ಸಂಭವಿಸಿದೆ. ಕುಸಿದ ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.