ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಲಾಕ್ ಡೌನ್ ಮತ್ತಷ್ಟು ಟಫ್: ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ; ಪೊಲೀಸರಿಗೆ ಖಡಕ್ ವಾರ್ನಿಂಗ್ ನೀಡಿದ ಗೃಹ ಸಚಿವ
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ವಿನಯ್ ಕುಲ್ಕರ್ಣಿ, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ವಿನಯ್ ಕುಲ್ಕರ್ಣಿ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಅವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ನೀಡದಂತೆ ವಾದ ಮಂಡಿಸಿದರು.
ಕೊರೊನಾ ಅಪಾಯ ತಡೆಯುವಲ್ಲಿ ಮಾಸ್ಕ್ ಹೇಗೆ ಪಾತ್ರ ವಹಿಸುತ್ತದೆ…..? ಇಲ್ಲಿದೆ ಮಾಹಿತಿ
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮಾಜಿ ಸಚಿವರಿಗೆ ಜಾಮೀನು ನಿರಾಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೀಡಾಗಿರುವ ವಿನಯ್ ಕುಲ್ಕರ್ಣಿ ಸಧ್ಯ ಹಿಂಡಲಗಾ ಜೈಲಿನಲ್ಲಿದ್ದು, ಸೆರೆವಾಸ ಅನುಭವಿಸುತ್ತಿದ್ದಾರೆ.