ಹೈದರಾಬಾದ್: ಕೊರೊನಾ ಸಂಕಷ್ಟದ ನಡುವೆ ದುರಂತವೊಂದು ಸಂಭವಿಸಿದೆ. ಸಹೋದರ ಹಾಗೂ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನುಕೊಂಡದಲ್ಲಿ ನಡೆದಿದೆ.
ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅಶ್ವತ್ಥಪ್ಪ (65) ಹಾಗೂ ಆತನ ಇಬ್ಬರು ಸಹೋದರಿಯರು ಒಂದೇ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆಯಿಂದ ವಾಸನೆ ಬರುತ್ತಿದ್ದ ಕಾರಣ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.