ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರದಿಂದ ಪ್ರಕಟಿಸಲಾದ ಪ್ಯಾಕೇಜ್ನಲ್ಲಿ ಎಲ್ಲಾ ಗ್ರಾಮ ಪಂಚಾಯತ್ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/-ರೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ, ಬಳ್ಳಾರಿ, ಮೈಸೂರು, ಬೆಳಗಾವಿ ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಿಎಂ, ಕೋವಿಡ್ 2ನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓ ಗಳಿಗೆ ಸ್ಥೈರ್ಯ ತುಂಬಿದರು.
ಕ್ಯಾನ್ಸರ್ನಿಂದ ಬಳಲುತ್ತಿರುವ ಸಹ ಸ್ಪರ್ಧಿಗೆ ರೇಸ್ ಪೂರೈಸಲು ನೆರವಾದ ವಿದ್ಯಾರ್ಥಿನಿಯರು
ಗ್ರಾಮೀಣ ಭಾಗದಲ್ಲಿ ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಡಬಲ್ ಮಾಸ್ಕ್ ಅಂದ್ರೇನು…? ಯಾವ ಮಾಸ್ಕ್ ಮೇಲೆ ಯಾವ ಮಾಸ್ಕ್ ಧರಿಸಬೇಕು…? ಇಲ್ಲಿದೆ ಕಂಪ್ಲೀಟ್ ಮಾಹಿತಿ
ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್ಗಳಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಹೆಲ್ಪ್ ಲೈನ್ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆಗಳ ಜೊತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು. ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರಿಗೆ ತೊಂದರೆಯಾದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರು ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ‘ಮಕ್ಕಳ ರಕ್ಷಣಾ ಸಮಿತಿ’ಗಳಿಗೆ ಸೇರಿಸಬೇಕು ಎಂದು ತಿಳಿಸಿದರು.