ಬೆಂಗಳೂರು: ಸಿಡಿ ಪ್ರಕರಣ ನಡೆದು 3 ತಿಂಗಳಾಯಿತು. ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಫ್ರೀಯಾಗಿ ಓಡಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರವೇ ಆರೋಪಿ ರಕ್ಷಣೆಗೆ ನಿಂತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನನ್ನ ಸಚಿವಗಿರಿಯನ್ನು ‘ನನ್ನ ಮಗ’ ಚಲಾಯಿಸುವುದನ್ನ ಸಹಿಸಲ್ಲ; ಇದು ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ; ಬಿ.ವೈ.ವಿಜಯೇಂದ್ರ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಯೋಗೇಶ್ವರ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಪ್ ಕೇಸ್ ಆರೋಪವಿದ್ದರೂ ರಮೇಶ್ ಜಾರಕಿಹೊಳಿ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ಕಳೆದ ಶನಿವಾರ ಆರೋಪಿ ಜಾರಕಿಹೊಳಿ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನೂ ಭೇಟಿಯಾಗಿದ್ದಾರೆ. ಎಸ್ ಐ ಟಿ ಮುಖ್ಯಸ್ಥರಿಗೆ ರಜೆಯ ಮೇಲೆ ಕಳುಹಿಸಿ, ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ಭೇಟಿಯಾಗಲು ಅವಕಾಶ ನೀಡಲಾಗಿರುವುದು ದೇಶದಲ್ಲಿಯೇ ಮೊದಲ ಪ್ರಕರಣ ಎಂದು ಕಿಡಿಕಾರಿದರು.
ʼಕೋವಿಶೀಲ್ಡ್ʼ ಲಸಿಕೆ ಕುರಿತ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ
ರಾಜ್ಯ ಸರ್ಕಾರ, ಸ್ವತಃ ಗೃಹ ಸಚಿವರು ರೇಪ್ ಕೇಸ್ ಆರೋಪಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ನಿಂತಿದೆ ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ. ಇದುವರೆಗೂ ಜಾರಕಿಹೊಳಿ ಮೆಡಿಕಲ್ ಟೆಸ್ಟ್ ಮಾಡಿಸಿಲ್ಲ, ಕೇವಲ ಬಿಪಿ, ಶುಗರ್ ಟೆಸ್ಟ್ ಮಾಡಿ ಕಳುಹಿಸಿದ್ದಾರೆ. ಮೊನ್ನೆಯಷ್ಟೇ ಸಿಡಿಯಲ್ಲಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾರೆ. ಆದರೂ ಕ್ರಮ ಕೈಗೊಂಡಿಲ್ಲ. ಸರ್ಕಾರವೇ ರಕ್ಷಣೆಗೆ ನಿಂತಿರುವುದರಿಂದ ಪೊಲೀಸರು ಕೈಕಟ್ಟಿಕುಳಿತಿದ್ದಾರೆ. ತಕ್ಷಣ ರಮೇಶ್ ಜಾರಕಿಹೊಳಿ ಬಂಧಿಸಬೇಕು ಎಂದು ಆಗ್ರಹಿಸಿದರು.