ನವದೆಹಲಿ: ‘ಯಾಸ್’ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪಶ್ಚಿಮಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಧಾನಿ ಪರೀಕ್ಷೆ ನಡೆಸಲಿದ್ದು ಚಂಡಮಾರುತದಿಂದ ಉಂಟಾಗಿರುವ ಹಾನಿಯ ಪರಿಶೀಲನೆ ನಡೆಸುವರು.
145 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಚಂಡಮಾರುತ ಅಬ್ಬರಿಸುತ್ತಿದ್ದು, ಪೂರ್ವ ಕರಾವಳಿಯ ಅನೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಹಾನಿ ಉಂಟಾಗಿದೆ. ವಸತಿ ಪ್ರದೇಶ, ಕೃಷಿ ಭೂಮಿ, ರಸ್ತೆ, ಸೇತುವೆ, ಕಟ್ಟಡಗಳು ಸೇರಿದಂತೆ ಭಾರೀ ಹಾನಿ ಉಂಟಾಗಿದ್ದು 21 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಪ್ರಧಾನಿ ಮೊದಲಿಗೆ ಒಡಿಶಾದ ಭುವನೇಶ್ವರಕ್ಕೆ ಭೇಟಿ ನೀಡಲಿದ್ದು, ಪರಿಶೀಲನೆ ಸಭೆ ನಡೆಸುವರು. ನಂತರ ಬಾಲಸೋರ್, ಭದ್ರಾಕ್ ಮತ್ತು ಪುರ್ಬಾ ಮದಿನಿಪುರದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾನಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.