ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದಾನೆ.
ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಜೂನ್ 4 ರೊಳಗೆ ಹೈಕೋರ್ಟ್ ಗೆ ಉತ್ತರ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಹೊಸ ಮಾಹಿತಿಯ ಪ್ರಕಾರ ಕೊರೊನಾದಿಂದ ಈವರೆಗೆ 3,18,895 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಚೇತರಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ ಕೊವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ ವಿ ಲಸಿಕೆ ಹಾಕಲಾಗ್ತಿದೆ. ಮೊದಲು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿತ್ತು. ನಂತ್ರ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿತ್ತು. ನಂತ್ರ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯ್ತು. ಈಗ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ನಡೆಯುತ್ತದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಆದ್ರೆ 18 ವರ್ಷ ಕೆಳಗಿನವರಿಗೆ ಲಸಿಕೆ ಹಾಕಲಾಗ್ತಿಲ್ಲ.