ರಾಯಚೂರು: ಕೊರೋನಾ ಸೋಂಕಿತ ದಂಪತಿ ಕೋವಿಡ್ ಕೇರ್ ಸೆಂಟರ್ ಗೆ ತೆರಳದೇ ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯಿಂದ ಪರಾರಿಯಾಗಿದ್ದಾರೆ.
ಅಧಿಕಾರಿಗಳು ಕೇಳಿಕೊಂಡರೂ ದಂಪತಿ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಪರಾರಿಯಾಗಿದ್ದು, ವೀರಗೋಟ ಗ್ರಾಮದ ದಂಪತಿಗೆ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೀರಗೋಟ ಗ್ರಾಮದ ದಂಪತಿ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಅಲ್ಲದೇ, ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಂಪತಿಯ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.