alex Certify BIG NEWS: ಒಂದೇ ದಿನದಲ್ಲಿ 3,460 ಜನರು ಕೋವಿಡ್ ಗೆ ಬಲಿ; 24 ಗಂಟೆಯಲ್ಲಿ 1.65 ಲಕ್ಷ ಮಂದಿಯಲ್ಲಿ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 3,460 ಜನರು ಕೋವಿಡ್ ಗೆ ಬಲಿ; 24 ಗಂಟೆಯಲ್ಲಿ 1.65 ಲಕ್ಷ ಮಂದಿಯಲ್ಲಿ ಕೊರೊನಾ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,65,553 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,78,94,800ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,460 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,25,972ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 21,14,508 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,54,54,320 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,76,309 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 21,20,66,614 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...