ಕೊಪ್ಪಳ: ಕೊರೊನಾ ಸೋಂಕು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿಯೊಂದು ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇದರ ಬೆನ್ನಲ್ಲೇ ಕೊಪ್ಪಳದ ಗ್ರಾಮವೊಂದರಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಜನರು ಕೋವಿಡ್ ಟೆಸ್ಟ್ ನಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇಂತವರಿಗಾಗಿ ಗಂಗಾವತಿಯ ಕೇಸರಹಟ್ಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ, ಕೋವಿಡ್ ಟೆಸ್ಟ್ ಗೆ ಒಳಪಡುವವರಿಗೆ 500 ರೂ. ಪ್ರೋತ್ಸಾಹಧನ ಘೋಷಿಸಿದ್ದಾರೆ ಎನ್ನಲಾಗಿದೆ.
ಮನೆ ಮನೆಗಳಿಗೆ ತೆರಳಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಮನವಿ ಮಾಡುತ್ತಿರುವ ಗ್ರಾಮಪಂಚಾಯಿತಿ ಅಧ್ಯಕ್ಷರು, ಜನರಿಗೆ ಒಂದು ದಿನದ ಕೂಲಿ ನೀಡುವ ಭರವಸೆ ನೀಡುತ್ತಿದ್ದಾರೆ. ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಸೂಚನೆ ಮೇರೆಗೆ ಕೊರೊನಾ ತಡೆಗೆ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದ ಬೆನ್ನಲ್ಲೇ ಇಂತದ್ದೊಂದು ವಿನೂತನ ಪ್ರಯತ್ನ ಮಾಡಲಾಗಿದೆ.