ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆ ಜೋಳ ನೀಡಲಾಗುತ್ತಿದೆ.
ಅದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬಳಕೆಯಲ್ಲಿರುವ ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೇಡಿಕೆಯಂತೆ ಕುಚ್ಚಲಕ್ಕಿ ವಿತರಿಸುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.