ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ನರೇಶ್ ಹಾಗೂ ಶ್ರವಣ್ ನೇತೃತ್ವದ ಸಿಡಿ ಗ್ಯಾಂಗ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ 91ನೇ ಸಿಟಿ ಸಿವಿಲ್ ಕೋರ್ಟ್, ಅರ್ಜಿ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.
ಎಸ್ಐಟಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಆಕ್ಷೇಪಣಾ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ, ನರೇಶ್, ಶ್ರವಣ್ ಹಾಗೂ ಸಿಡಿ ಗ್ಯಾಂಗ್ ವಿರುದ್ಧ ಬ್ಲ್ಯಾಕ್ ಮೇಲ್ ಕೇಸ್ ದಾಖಲಿಸಿದ್ದರು. ಬಂಧನ ಭೀತಿ ಹಿನ್ನೆಲೆಯಲ್ಲಿ ಸಿಡಿ ಗ್ಯಾಂಗ್ ಕೋರ್ಟ್ ಮೆಟ್ಟಿಲೇರಿತ್ತು.