alex Certify GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ; 24 ಗಂಟೆಯಲ್ಲಿ 1,27,510 ಜನರಲ್ಲಿ ಕೊರೊನಾ ಪಾಸಿಟಿವ್; 2,55,287 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ; 24 ಗಂಟೆಯಲ್ಲಿ 1,27,510 ಜನರಲ್ಲಿ ಕೊರೊನಾ ಪಾಸಿಟಿವ್; 2,55,287 ಮಂದಿ ಡಿಸ್ಚಾರ್ಜ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈ ನಡುವೆ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,27,510 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2,795 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,31,895ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 18,95,520 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,59,47,629 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,55,287 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 21,60,46,638 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...