ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದು, ಅವರ ಇಂದು ಮತ್ತು ನಾಳಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಸಿದ್ದರಾಮಯ್ಯ ವಿಪರೀತ ಜ್ವರದಿಂದ ಬಳಲುತ್ತಿದ್ದು, ಕೋವಿಡ್ ಟೆಸ್ಟ್ ಗೂ ಒಳಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ವಿಶ್ರಾಂತಿ ಪಡೆದಿದ್ದು, ಆರೋಗ್ಯ ತಪಾಸಣೆ ನಡೆಸಲಾಗಿದೆ.