ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸಕ್ಕೆ ಜನರು ತತ್ತರಿಸುತ್ತಿದ್ದಾರೆ. 51 ಜನರು ಕಪ್ಪು ಶಿಲೀಂದ್ರ ಸೋಂಕಿನ ಭೀಕರತೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಹೊಸ ಹೊಸ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದೆ. 1,370 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, 51 ಜನರು ಸಾವನ್ನಪ್ಪಿದ್ದಾರೆ. 27 ಜನರು ಗುಣಮುಖರಾಗಿದ್ದಾರೆ. 1,292 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಕೊರತೆಯೇ ರೋಗಿಗಳು ಸಾವನ್ನಪ್ಪಲು ಕಾರಣವಾಗಿದೆ.
ಈ ನಡುವೆ ದೇಶದಲ್ಲಿ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಪ್ರಕರಣ ರಾಜ್ಯದಲ್ಲಿ ಪತ್ತೆಯಾಗಿರುವುದು ಇನ್ನಷ್ಟು ಆತಂಕ ಹೆಚ್ಚಿಸಿದೆ. ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿದ್ದ 54 ವರ್ಷದ ವ್ಯಕ್ತಿಯಲ್ಲಿ ಚರ್ಮದ ಮೇಲೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ದೇಶದಲ್ಲೇ ಮೊದಲ ಪ್ರಕರಣ ಎಂದು ಇಎನ್ ಟಿ ವೈದ್ಯ ಡಾ.ಎನ್.ಬಿ.ಪ್ರಹ್ಲಾದ್ ತಿಳಿಸಿದ್ದಾರೆ.