ಚಿಕ್ಕಮಗಳೂರು: ಕ್ಲಿನಿಕ್ ನಿಂದ ಮನೆಗೆ ಹೋಗುತ್ತಿದ್ದ ವೈದ್ಯನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ನಾಲ್ವರನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಿನ್ನೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣು, ನಿತಿನ್, ವೆಂಕಟೇಶ್, ಚಂದ್ರಶೇಖರ್ ಎಂಬುವವರನ್ನು ಬಂಧಿಸಲಾಗಿದೆ. ಮೇ 29 ರಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಡಸ ಗ್ರಾಮದ 9 ವರ್ಷದ ಭುವನ್ ಮೃತಪಟ್ಟಿದ್ದು, ಮಗುವಿನ ಸಾವಿನ ಪ್ರತೀಕಾರಕ್ಕೆ ವೈದ್ಯನ ಕೊಲೆಗೆ ಸ್ಕೆಚ್ ರೂಪಿಸಿದ್ದರು. ಮಾರಕಾಸ್ತ್ರಗಳಿಂದ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.