ನವದೆಹಲಿ: ಎಲೆಕ್ಟ್ರಿಕ್ ವಾಹನ ನೋಂದಣಿ ಶುಲ್ಕ ವಿನಾಯಿತಿಗೆ ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.
ದೇಶದಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯದ ವತಿಯಿಂದ ಬ್ಯಾಟರಿ ಚಾಲಿತ ವಾಹನಗಳಿಗೆ ನೋಂದಣಿ ಪ್ರಮಾಣಪತ್ರ ನೀಡಲು ಮತ್ತು ಆರ್ಸಿ ಪರಿಷ್ಕರಿಸಲು ಶುಲ್ಕ ವಿನಾಯಿತಿ ನೀಡುವ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮೇ 27 ರಂದು ಈ ಕುರಿತಾದ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, 30 ದಿನಗಳ ಒಳಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಲಾಗಿದೆ.