ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ ಈ ಬಗ್ಗೆ ಸ್ವತಃ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು ಸಂಜೆ ಅಥವಾ ನಾಳೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಲಾಕ್ ಡೌನ್ ವಿಸ್ತರಣೆ ಹಾಗೂ ಬಿಗಿ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಆದರೆ ರಫ್ತು ಮಾಡುವ ಉದ್ಯಮಗಳಿಗೆ ಗುರುವಾರದಿದ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಎಂದರು.
ಮತ್ತಷ್ಟು ಕ್ಷೇತ್ರಗಳಿಗೆ ವಿನಾಯಿತಿ ನೀಡುವ ಬಗ್ಗೆ ಹಾಗೂ ಎರಡನೇ ಪ್ಯಾಕೇಜ್ ಬಗ್ಗೆಯೂ ಒಂದೆರಡು ದಿನಗಳಲ್ಲಿ ಘೋಷಿಸುವುದಾಗಿ ತಿಳಿಸಿದರು. ಈ ಮೂಲಕ ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಖಚಿತ ಎನ್ನಲಾಗಿದೆ.