ಪಾಟ್ನಾ: ಇನ್ಮುಂದೆ ಪೊಲೀಸರು ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಂತಿಲ್ಲ. ಇಂತದ್ದೊಂದು ಮಹತ್ವದ ಆದೇಶವನ್ನು ಬಿಹಾರ ಸರ್ಕಾರ ಹೊರಡಿಸಿದೆ.
ಕರ್ತವ್ಯ ನಿರತ ಪೊಲೀಸರು ತಮ್ಮ ಜವಾಬ್ದಾರಿ ಬಿಟ್ಟು ಸೋಶಿಯಲ್ ಮೀಡಿಯಾಗಳಲ್ಲಿ ಮುಗ್ನರಾಗಿರುವ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಹಾರ ಪೊಲೀಸ್ ಡಿಜಿ-ಐಜಿಪಿ ಈ ಮಹತ್ವದ ಆದೇಶ ಹೊರಡಿಸಿದ್ದು, ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗಳು ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಕೆ ಮಾಡುವಂತಿಲ್ಲ ಎಂದು ಸೂಚಿಸಿದೆ.
ವಿಶೇಷ ಸಂದರ್ಭಗಳಲ್ಲಿ ಕೆಲ ಪೊಲೀಸ್ ಅಧಿಕಾರಿಗಳಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.