ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಎರಡನೇ ಅಲೆ ನಡುವೆಯೇ ಮೂರನೇ ಅಲೆಯ ಆತಂಕವೂ ಎದುರಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ನಡುವೆ ಪ್ರಕಟಣೆ ಹೊರಡಿಸಿರುವ ಸಚಿವ ಸುರೇಶ್ ಕುಮಾರ್, ಪರೀಕ್ಷೆ ಬಗ್ಗೆ ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ಪೋಷಕರ ಜೊತೆ ಸಮಾಲೋಚನೆ ಮುಂದುವರಿದಿದೆ.
ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.