ಪಾಟ್ನಾ: ಬಿಹಾರದ ಪಾಟ್ನಾದಲ್ಲಿರುವ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ನಲ್ಲಿ ಮಕ್ಕಳ ಮೇಲೆ ಕೊರೋನಾ ಲಸಿಕೆಯ ಪ್ರಯೋಗ ಆರಂಭಿಸಲಾಗಿದೆ.
ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆ ಕ್ಲಿನಿಕಲ್ ಪ್ರಯೋಗವನ್ನು ಮಕ್ಕಳ ಮೇಲೆ ಆರಂಭಿಸಲಾಗಿದೆ. 2 – 18 ವರ್ಷದವರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿದೆ.
ದೇಶದ ವಿವಿಧ ವೈದ್ಯಕೀಯ ಸಂಸ್ಥೆಗಳಲ್ಲಿ 525 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ಸಿದ್ಧತೆ ನಡೆಸಲಾಗಿದೆ. ಮೊದಲ ಹಂತದಲ್ಲಿ ಪಾಟ್ನಾದ ಏಮ್ಸ್ ನಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಈ ಪ್ರಯೋಗಗಳ ದತ್ತಾಂಶದ ಆಧಾರದ ಮೇಲೆ ಮುಂದಿನ ಹಂತದಲ್ಲಿ ಎಲ್ಲ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.