ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುವುದೇ? ಮುಂದೂಡಲಾಗುವುದೇ? ಅಥವಾ ರದ್ದು ಮಾಡಲಾಗುವುದೇ ಎಂಬುದರ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ.
ಸಿಬಿಎಸ್ಇ ಮಂಡಳಿ ಈಗಾಗಲೇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅನೇಕ ರಾಜ್ಯಗಳಲ್ಲಿ ಕೂಡ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿಯೂ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಶಿಕ್ಷಣ ಸಚಿವರು ನಾಳೆ ನಡೆಸಲಿರುವ ಸುದ್ದಿಗೋಷ್ಠಿ ಭಾರಿ ಕುತೂಹಲ ಮೂಡಿಸಿದೆ.