ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೂ ಇದ್ದ ಕಠಿಣ ನಿರ್ಬಂಧಗಳನ್ನು ಜೂನ್ 14 ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಿರ್ಬಂಧಗಳಲ್ಲಿ ಯಾವುದೇ ಬದಲಾವಣೆ ಇರಲ್ಲ. ಇನ್ನೂ ಒಂದು ವಾರ ಮನೆ ವಾಸ ಮಾಡಬೇಕಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಸೋಂಕಿನ ಸರಪಳಿ ತುಂಡರಿಸಲು ಒಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸೋಂಕಿನ ಪಾಸಿಟಿವಿಟಿ ದರ ಶೇಕಡ 5 ಕ್ಕಿಂತ ಕಡಿಮೆಯಾದರೆ ಮಾತ್ರ ಜೂನ್ 14 ರ ನಂತರ ಎಲ್ಲಾ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ರಫ್ತು ಆಧಾರಿತ ಕೈಗಾರಿಕೆಗಳಿಗೆ ಮಾತ್ರ ನಿಯಮ ಸಡಿಲಿಕೆ ಮಾಡಲಾಗಿದೆ. ಉಳಿದಂತೆ ಹೋಟೆಲ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.