ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆ ಕಾಯ್ದೆ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ರೂಪಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ.
ಕಳೆದ ವರ್ಷದ ವರ್ಗಾವಣೆಯಲ್ಲಿ ಕಡ್ಡಾಯ ವರ್ಗಾವಣೆ ಮತ್ತು ಹೆಚ್ಚುವರಿ ವರ್ಗಾವಣೆಗೆ ಸಿಲುಕಿದ್ದ ಶಿಕ್ಷಕರಿಗೆ ವರ್ಗಾವಣೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ ಅಧಿನಿಯಮ 2020 ಮೂಲಕ ಕರಡು ಪ್ರತಿ ರೂಪಿಸಲಾಗಿದ್ದು, 7 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಹಿಂದೆ ಕಡ್ಡಾಯ ವರ್ಗಾವಣೆ ವಲಯ ವರ್ಗಾವಣೆ ಸಮರ್ಪಕ ಮರುಹಂಚಿಕೆ ಮೇರೆಗೆ ವರ್ಗಾವಣೆಯಾದ ಸ್ಥಳಗಳಲ್ಲಿ ಸ್ಥಳ ಆಯ್ಕೆ ಮಾಡಿಕೊಂಡು ಕೆಲಸಕ್ಕೆ ಹಾಜರಾದ ಶಿಕ್ಷಕರಿಗೆ ವರ್ಗಾವಣೆ ಪೂರ್ವದಲ್ಲಿ ಎಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆಯೋ ಅಲ್ಲಿಗೆ ನಿಯುಕ್ತಿ ನೀಡುವುದು ಕಾಯ್ದೆಯ ಉದ್ದೇಶವಾಗಿದೆ ಎಂದು ಹೇಳಲಾಗಿದೆ.