ಬೆಂಗಳೂರು: ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಲಾಗಿದ್ದು, ಆದರೆ ಎಸ್.ಎಸ್.ಎಲ್.ಸಿ.ಗೆ ಈ ಬಾರಿ ಎರಡು ಪರೀಕ್ಷೆ ನಡೆಸಲು ನಿರ್ಧರಿಸಿದ್ದೇವೆ ಎಂದರು, ಗಣಿತ ಹಾಗೂ ಸಮಾಜ ವಿಜ್ಞಾನ ಮೂರು ವಿಷಯ ಸೇರಿಸಿ ಒಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇನ್ನೊಂದು ಭಾಷೆಗೆ ಸಂಬಂಧಿಸಿದ ಪರೀಕ್ಷೆ. ಐಚ್ಛಿಕ ಭಾಷೆಗಳಿಗೆ ಒಂದೇ ಪೇಪರ್ ಇರಲಿದ್ದು, ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ. A+ ಹಾಗೂ A ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶ ನೀಡಲಾಗುತ್ತದೆ.
ಒಂದು ಕೊಠಡಿಯಲ್ಲಿ 10-12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರಲಿದ್ದು, ವಿದ್ಯಾರ್ಥಿಗಳಿಗೆ N95 ಮಾಸ್ಕ್ ನೀಡಲು ನಿರ್ಧರಿಸಲಾಗಿದೆ. 6 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವುದಿಲ್ಲ. ಆದರೆ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡಲಾಗುತ್ತದೆ.