ಶಿವಮೊಗ್ಗ: ಕೋವಿಡ್ -19 ರ ಎರಡನೇ ಅಲೆಯ ತೀವ್ರತೆ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿ ಆದೇಶಿಸಿರುವುದರಿಂದ ಪಾದರಕ್ಷೆ ತಯಾರಿಕೆ ಮತ್ತು ದುರಸ್ತಿಯಲ್ಲಿ ಹಾಗೂ ಚರ್ಮ ಹದ ಮಾಡುವ ಕಾಯಕದಲ್ಲಿ ತೊಡಗಿರುವ ಚಮ್ಮಾರರು/ಚರ್ಮ ಕುಶಲಕರ್ಮಿಗಳು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಇವರಿಗೆ ತಾತ್ಕಾಲಿಕ ಪರಿಹಾರವಾಗಿ ಒಂದು ಬಾರಿ ಪರಿಹಾರ ಧನ 2000 ರೂ. ನೀಡಲು ಕೆಲ ನಿಬಂಧಗಳಿಗೆ ಒಳಪಟ್ಟು ಮಂಜೂರಾತಿ ನೀಡಲಾಗಿದೆ.
ಚರ್ಮ ಕುಶಲಕರ್ಮಿಗಳು ಈ ಪರಿಹಾರ ಧನವನ್ನು ಪಡೆಯಲು ಆನ್ಲೈನ್ ಮೂಲಕ “ಸೇವಾ ಸಿಂಧು” ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಜೂನ್ 6 ರಿಂದ ಅವಕಾಶ ಕಲ್ಪಿಸಲಾಗಿದ್ದು, ಜೂನ್ 15 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ.
ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಪರಿಹಾರ ಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವವಾಗಿ ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗುವುದು. ಚಮ್ಮಾರರು/ಚರ್ಮ ಕುಶಲಕರ್ಮಿಗಳು ಈ ವಿಶೇಷ ಪ್ಯಾಕೇಜ್ನ ಸದುಪಯೋಗ ಪಡೆದುಕೊಂಡು ಯೋಜನೆಯನ್ನು ಯಶಸ್ವಿಗೊಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಲಿಡ್ಕರ್ ಜಿಲ್ಲಾ ಸಂಯೋಜಕರು ಅಥವಾ ಲಿಡ್ಕರ್ ಪ್ರಧಾನ ಕಚೇರಿಯನ್ನು ಸಂಪರ್ಕಿಸಬಹುದೆಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.