ಬೆಂಗಳೂರು: ಕೊರೋನಾ ಲಸಿಕೆ ಪಡೆಯಲು ಗುರುತಿನ ಚೀಟಿ ಬೇಕಿಲ್ಲ. ಗುರುತಿನ ಚೀಟಿ ಇಲ್ಲದವರಿಗೆ ಕೂಡ ಲಸಿಕೆ ನೀಡುವಂತೆ ಸರ್ಕಾರ ಸೂಚಿಸಿದೆ.
ಕೊರೋನಾ ಲಸಿಕೆ ಪಡೆಯಲು ಆಧಾರ್, ಪಾನ್ ಕಾರ್ಡ್, ವೋಟರ್ ಐಡಿ, ಪಾಸ್ಪೋರ್ಟ್ ಸೇರಿದಂತೆ ಯಾವುದಾದರೊಂದು ಗುರುತಿನ ಚೀಟಿ ಕಡ್ಡಾಯ ಕೊಡಬೇಕಿತ್ತು. ಆದರೆ, ಈಗಾಗಲೇ ಲಸಿಕೆ ಪಡೆದುಕೊಳ್ಳುತ್ತಿರುವ ಮುಂಚೂಣಿ ಕಾರ್ಯಕರ್ತರ ಬಳಿ ದಾಖಲೆ ಇಲ್ಲದಿದ್ದರೂ ಕೂಡ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದಕ್ಕಾಗಿಯೇ ಕೋ -ವಿನ್ ತಂತ್ರಾಂಶದಲ್ಲಿ ಪ್ರತ್ಯೇಕ ಆಯ್ಕೆ ನೀಡಲಾಗಿದೆ.
ರಾಜ್ಯದಲ್ಲಿ ಇದೇ ಮಾದರಿಯನ್ನು ಬಳಸಿಕೊಂಡು ಗುರುತಿನ ಚೀಟಿ ಇಲ್ಲದ ಮುಂಚೂಣಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಲಸಿಕೆ ನೀಡಬೇಕು ಎಂದು ತಿಳಿಸಲಾಗಿದೆ. ಲಸಿಕೆ ಅಭಿಯಾನದ ಮುಖ್ಯಸ್ಥರು ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ಅರುಂಧತಿ ಚಂದ್ರಶೇಖರ್ ಅವರು ಈ ಕುರಿತಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.