ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಸಿಇಟಿ ಮತ್ತು ನೀಟ್ ಅಂಕಗಳನ್ನು ಮಾತ್ರ ಪರಿಗಣಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವರಾದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಪಿಯುಸಿ ಪರೀಕ್ಷೆ ಇಲ್ಲದೆ ಪಾಸಾಗುವ ವಿದ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮೊದಲಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ(CET), ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಅಂಕಗಳನ್ನು ಮಾತ್ರ ಪರಿಗಣಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕಿಂಗ್ ನೀಡುವಂತೆ ಪತ್ರ ಬರೆದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಸುರೇಶ್ ಕುಮಾರ್ ಅವರ ಸಲಹೆಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.