alex Certify BIG NEWS: ಇಳಿಕೆಯತ್ತ ಸಾಗಿದ ಕೊರೊನಾ ಪಾಸಿಟಿವಿಟಿ ಕೇಸ್; 24 ಗಂಟೆಯಲ್ಲಿ 1,00,636 ಜನರಲ್ಲಿ ಸೋಂಕು ದೃಢ; 2427 ಜನರು ಕೋವಿಡ್ ಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಳಿಕೆಯತ್ತ ಸಾಗಿದ ಕೊರೊನಾ ಪಾಸಿಟಿವಿಟಿ ಕೇಸ್; 24 ಗಂಟೆಯಲ್ಲಿ 1,00,636 ಜನರಲ್ಲಿ ಸೋಂಕು ದೃಢ; 2427 ಜನರು ಕೋವಿಡ್ ಗೆ ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,00,636 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2427 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,49,186ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14,01,609 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,71,59,180 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,74,399 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 15,87,589 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 36,63,34,111 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 23,27,86,482 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...