ಬೆಂಗಳೂರು: ಸಿಎಂ ಪರವಾಗಿ 65 ಶಾಸಕರ ಸಹಿ ಸಂಗ್ರಹ ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಆರ್.ಅಶೋಕ್, ಯಾರೂ ಕೂಡ ಸಹಿ ಸಂಗ್ರಹ ಅಭಿಯಾನದಲ್ಲಿ ತೊಡಗುವಂತಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಯಾವುದೇ ಚರ್ಚೆಯಿಲ್ಲ. ಸಿಎಂ ಪರವಾಗಿಯಾಗಲಿ ಅಥವಾ ವಿರೋಧವಾಗಿಯಾಗಲಿ ಸಹಿ ಸಂಗ್ರಹ ಮಾಡುವಂತಿಲ್ಲ. ಹಾಗೊಂದು ವೇಳೆ ನಿಯಮ ಮೀರಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತದೆ. ಕಳೆದ ಬಾರಿ ಒಮ್ಮೆಲೆ ಲಾಕ್ ಡೌನ್ ಸಡಿಲಿಕೆ ಮಾಡಿದ್ದರಿದ ಸಮಸ್ಯೆಯಾಗಿತ್ತು. ಹಾಗಾಗಿ ಈ ಬಾರಿ ಆಯಾ ಭಾಗದಲ್ಲಿನ ಪಾಸಿಟಿವಿಟಿ ರೇಟ್ ನೋಡಿಕೊಂಡು ತೀರ್ಮಾನ ಮಡಲಾಗುತ್ತದೆ ಎಂದರು.