alex Certify ಸಹಿ ಸಂಗ್ರಹ ಚಟುವಟಿಕೆ ಹೊತ್ತಲ್ಲೇ ಬಿಜೆಪಿ ಶಾಸಕರಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಿ ಸಂಗ್ರಹ ಚಟುವಟಿಕೆ ಹೊತ್ತಲ್ಲೇ ಬಿಜೆಪಿ ಶಾಸಕರಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸೂಚನೆ

ಬೆಂಗಳೂರು: ರಾಜೀನಾಮೆ ಬಗ್ಗೆ ಹೇಳಿಕೆ ನೀಡಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸಿಎಂ ಯಡಿಯೂರಪ್ಪ, ಬಿಜೆಪಿ ಶಾಸಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ಅವರನ್ನು ಬೆಂಬಲಿಸಿ ಕೆಲವು ಶಾಸಕರು ಸಹಿ ಸಂಗ್ರಹಿಸುತ್ತಿದ್ದು, ಈ ಬೆಳವಣಿಗೆ ಬಗ್ಗೆ ಪಕ್ಷದ ವಲಯದಲ್ಲಿಯೇ ಆಕ್ಷೇಪ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಪಕ್ಷದ ಶಾಸಕರಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸೂಚನೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೊರೋನಾ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...